BBMP Recruitment 2024: ಬಿಬಿಎಂಪಿಯಲ್ಲಿ 11307 ಪೌರಕಾರ್ಮಿಕರು ಹುದ್ದೆಗಳ ಬೃಹತ್ ನೇಮಕಾತಿ

BBMP Pourakarmika Recruitment 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ : ಪೌರಕಾರ್ಮಿಕರು (ಗ್ರೂಪ್ ‘ಡಿ’)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಒಟ್ಟು ಹುದ್ದೆಗಳು: 11,307 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ10402
ಕಲ್ಯಾಣ-ಕರ್ನಾಟಕ ವೃಂದ905

Qualification/ ಅರ್ಹತೆಗಳು :

  • ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 02-03-2023) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
    ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್ ಹುದ್ದೆಗಳ ನೇಮಕಾತಿ 2024

Age Limit / ವಯೋಮಿತಿ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

Salary scale/ ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ :

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 15, 2024

ಪ್ರಮುಖ ಲಿಂಕುಗಳು 

ಹೊಸ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಹಳೆಯ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

Sharing is caring!